ಯೋಹಾನ 18:1 - ಕನ್ನಡ ಸಮಕಾಲಿಕ ಅನುವಾದ1 ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುನ್ ಹಿ ಮಾಗ್ನಿ ಸಾಂಗುನ್ ಹೊಲ್ಲ್ಯಾ ತನ್ನಾ, ತೊ ಅಪ್ನಾಚ್ಯಾ ಶಿಸಾಕ್ನಿ ವಾಂಗ್ಡಾ ಘೆವ್ನ್ ಕೆದ್ರೊನ್ ಮನ್ತಲೊ ಕರ್‍ಕೊ ದಾಟುನ್ ಗೆಲೊ, ಥೈ ಎಕ್ ಮ್ಹಳೊ ಹೊತ್ತೊ, ತೆನಿ ತ್ಯಾ ಮಳ್ಯಾತ್ ಗುಸ್ಲ್ಯಾನಿ. ಅಧ್ಯಾಯವನ್ನು ನೋಡಿ |
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.