Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುನ್ ಪೆದ್ರುಕ್, “ತುಜೊ ಚಾಕು ಪಿಸ್ವಿತ್ ಘಾಲ್ ಮಾಜ್ಯಾ ಬಾಬಾನ್ ಮಾಕಾ ದಿಲ್ಲ್ಯಾ ಕಸ್ಟಾಚ್ಯಾ ಆಯ್ದಾನಾತ್ಲೆ ಫಿತಲೆ ನಕ್ಕೊ ಮನ್ತೆ ಕಾಯ್ ತಿಯಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:11
22 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.


“ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.


ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು