ಯೋಹಾನ 18:16 - ಕನ್ನಡ ಸಮಕಾಲಿಕ ಅನುವಾದ16 ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪೇತ್ರನು ಹೊರಗೆ ಬಾಗಲ ಹತ್ತರ ನಿಂತಿದ್ದರಿಂದ ಮಹಾಯಾಜಕನ ಪರಿಚಿತನಾದ ಆ ಶಿಷ್ಯನು ಹೊರಗೆ ಬಂದು ಬಾಗಲು ಕಾಯುವವಳ ಸಂಗಡ ಮಾತಾಡಿ ಪೇತ್ರನನ್ನು ಒಳಕ್ಕೆ ಕರಕೊಂಡು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಪೆದ್ರು ಭಾಯ್ರ್ ದಾರಾತ್ ಭುತ್ತುರ್ ಗುಸ್ತಲ್ಯಾಕ್ಡೆ ಇಬೆ ಹೊತ್ತೊ, ತನ್ನಾ ತೊ ಅನಿ ಎಕ್ಲೊ ಮೊಟ್ಯಾ ಯಾಜಕಾಂಚ್ಯಾ ವಳ್ಕಿಚೊ ಶಿಸ್ ಭಾಯ್ರ್ ಯೆಲೊ. ಅನಿ ತೆನಿ ಎಕ್ಲ್ಯಾ ಕಾಮಾಚ್ಯಾ ಚೆಡ್ವಾಕ್ಡೆ ಸಾಂಗುನ್ ಪೆದ್ರುಕ್ ಭುತ್ತುರ್ ಘೆವ್ನ್ ಯೆಲ್ಯಾನ್. ಅಧ್ಯಾಯವನ್ನು ನೋಡಿ |