ಯೋಹಾನ 18:28 - ಕನ್ನಡ ಸಮಕಾಲಿಕ ಅನುವಾದ28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಸಕ್ಕಾಳಿ ಫಿಡೆ ನಸ್ಕಾತ್ ಜೆಜುಕ್ ಕಾಯಿಫಾಸಾಚ್ಯಾ ಘರಾತ್ನಾ ಮೊಟ್ಯಾ ಅದಿಕಾರ್‍ಯಾಚ್ಯಾ ಪಿಲಾತಾಚ್ಯಾ ಘರಾಕ್ಡೆ ಘೆವ್ನ್ ಜಾವ್ನ್ ಹೊಲೆ. ಬಸ್ಟಗಾರ್ ಹೊವ್ನ್ ಪಾಸ್ಕಾಚ್ಯಾ ಸನಾಚೆ ಬೊಕ್ಡಾಚೆ ಜೆವಾನ್ ಜೆವ್ಕ್ ಸಮಸ್ಯೆ ಹೊಯ್ಲ್ ಮನುನ್ ಜುದೆವ್ ಲೊಕಾಂಚೆ ಅದಿಕಾರಿ ರಾಜಾಚ್ಯಾ ಘರಾತ್ ಭುತ್ತುರ್ ಗುಸುಕ್‍ನ್ಯಾತ್. ಅಧ್ಯಾಯವನ್ನು ನೋಡಿ |