Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:3 - ಕನ್ನಡ ಸಮಕಾಲಿಕ ಅನುವಾದ

3 ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ಜುದಾಸ್ ರೊಮಾಚ್ಯಾ ಸೈನಿಕಾಚೊ ಎಕ್ ತಾಂಡೊ, ಅನಿ ಉಲ್ಲ್ಯಾ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾಕ್ನಿ, ಘೆವ್ನ್ ತ್ಯಾ ಮಳ್ಯಾಕ್ ಯೆಲೊ, ತೆಂಕಾ ಯಾಜಕಾಂಚ್ಯಾ ಮುಖಂಡಾನಿ ಅನಿ ಫಾರಿಜೆವಾನಿ ಧಾಡುನ್ ದಿಲ್ಲ್ಯಾನಿ, ತೆನಿ ಹಾತಿಯಾರಾ, ಲಾಟ್ನಿಯಾ, ಅನಿ ಚುಡ್ತಿಯಾ ಘೆವ್ನ್ ಯೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:3
15 ತಿಳಿವುಗಳ ಹೋಲಿಕೆ  

ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು