Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:40 - ಕನ್ನಡ ಸಮಕಾಲಿಕ ಅನುವಾದ

40 ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅದಕ್ಕೆ ಅವರು - ಇವನನ್ನು ಬೇಡ, ಬರಬ್ಬನನ್ನು ಬಿಟ್ಟುಕೊಡಬೇಕು ಎಂದು ತಿರಿಗಿ ಕೂಗಿ ಹೇಳಿದರು. ಈ ಬರಬ್ಬನು ಕಳ್ಳನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ತೆನಿ,“ನಕ್ಕೊ, ತೆಕಾ ನಕ್ಕೊ ಅಮ್ಕಾ ಬಾರಾಬ್ಬಾಸ್ ಪಾಜೆ!” ಮನುನ್ ಬೊಬ್ ಮಾರುಂಗೆತ್ ಜಬಾಬ್ ದಿಲ್ಯಾನಿ, ಬಾರಾಬ್ಬಾಸ್ ಎಕ್ ಹೊರಾಟ್ ಕರ್‍ತಲೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:40
8 ತಿಳಿವುಗಳ ಹೋಲಿಕೆ  

ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.


ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.


ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು