Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪಿಲಾತನು - ನನ್ನ ಸಂಗಡಲೂ ನೀನು ಮಾತಾಡುವದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬದು ನಿನಗೆ ಗೊತ್ತಿಲ್ಲವೋ ಎಂದು ಆತನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಿಲಾತಾನ್ ತೆಕಾ, “ತಿಯಾ ಮಾಜಾಕ್ಡೆ ಬೊಲಿನಿ ಮಾಕಾ ತುಕಾ ಸೊಡುಕ್ ಅದಿಕಾರ್ ಹಾಯ್, ಅನಿ ಕುರ್ಸಾರ್ ಮಾರುಕ್ಬಿ ಅದಿಕಾರ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:10
5 ತಿಳಿವುಗಳ ಹೋಲಿಕೆ  

ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು