Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಕಾ ಜೆಜುನ್, “ತುಕಾ ಮಾಜೆ ವರ್ತಿ ಅದಿಕಾರ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೊ ಅದಿಕಾರ್ ತುಕಾ ದಿಲ್ಯಾನಾಯ್, ತೆಚೆಸಾಟ್ನಿ ಜೊ ಕೊನ್ ಮಾಕಾ ತುಜ್ಯಾ ಹಾತಿತ್ ಒಪ್ಸುನ್ ದಿಲ್ಯಾನಾಯ್ ತೆಕಾ ಮೊಟೊ ಪಾಪ್ ಲಾಗ್ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:11
37 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.


ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.


ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು