ಯೋಹಾನ 19:15 - ಕನ್ನಡ ಸಮಕಾಲಿಕ ಅನುವಾದ15 ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯಾ ಲೊಕಾನಿ, “ತೆಕಾ ಜಿವಾನಿ ಮಾರ್! ತೆಕಾ ಜಿವಾನಿ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ತನ್ನಾ ಪಿಲಾತಾನ್ ತೆಂಕಾ, “ಮಿಯಾ ತುಮ್ಚ್ಯಾ ರಾಜಾಕ್ ಕುರ್ಸಾರ್ ಮಾರುಚೆ?” ಮನುನ್ ಇಚಾರ್‍ಲ್ಯಾನ್, ತನ್ನಾ ಯಾಜಕಾಂಚ್ಯಾ ಮುಖಂಡಾನಿ, “ಅಮ್ಕಾ ಎಕ್ಲೊಚ್ ಎಕ್ ರಾಜಾ ಹಾಯ್ ತೊ ಸಿಜರ್” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |