Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:19 - ಕನ್ನಡ ಸಮಕಾಲಿಕ ಅನುವಾದ

19 ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಿಲಾತಾನ್ ಎಕ್ ಫಳಿ ವರ್ತಿ “ಜೆಜು ನಜರೆನ್ ಜುದೆವಾಂಚೊ ರಾಜಾ” ಮನುನ್ ಲಿವ್ನ್ ಕುರ್ಸಾ ವರ್ತಿ ಲಾವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:19
14 ತಿಳಿವುಗಳ ಹೋಲಿಕೆ  

ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.


ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು: ಈತನು ಯೆಹೂದ್ಯರ ಅರಸನು.


ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.


ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.


ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು.


ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.


“ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವಿನ ಕೆನ್ನೆಗೆ ಹೊಡೆದರು.


ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.


ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


“ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು