Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:39 - ಕನ್ನಡ ಸಮಕಾಲಿಕ ಅನುವಾದ

39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು, ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತಕ್ಕೊಂಡು ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಆ ಸುಗಂಧದ್ರವ್ಯವು ರಕ್ತ ಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಎಕ್ ದಿಸ್ ರಾಚ್ಚೆಂಚೆ ಜೆಜುಕ್ ಬಗುಕ್ ಮನುನ್ ಯೆಲ್ಲೊ, ನಿಕೊದೆಮ್, ಜಗ್ಗೊಳ್-ಜಗ್ಗೊಳ್ ತಿಸ್ ಕಿಲೊವ್ ಹೊಯ್ಲ್ ತವ್ಡೆ ಸುಗಂದ್ ತೆಲ್ ಅನಿ ಲೊಳಿಸಾರ್ ಮಿಸಳಲ್ಲೆ ತೆಲ್ ಘೆವ್ನ್ ಜುಜೆಚ್ಯಾ ವಾಂಗ್ಡಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:39
15 ತಿಳಿವುಗಳ ಹೋಲಿಕೆ  

ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.


ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.


ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.


ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.


ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.


ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.


ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.


ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.


ನನ್ನ ಪ್ರಿಯತಮನು ನನ್ನ ಸ್ತನಗಳ ಮಧ್ಯದಲ್ಲಿ ವಿಶ್ರಾಂತಿ ಪಡೆಯುವ ರಕ್ತಬೋಳದ ಚೀಲದಂತಿರುವನು.


ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು