ಯೋಹಾನ 19:4 - ಕನ್ನಡ ಸಮಕಾಲಿಕ ಅನುವಾದ4 ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತರುವಾಯ ಪಿಲಾತನು ತಿರಿಗಿ ಹೊರಗೆ ಬಂದು ಯೆಹೂದ್ಯರಿಗೆ - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ಹೊರಗೆ ತರುತ್ತೇನೆ, ನೋಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪಿಲಾತ್ ಅನಿ ಎಗ್ದಾ ಭಾಯ್ರ್ ಲೊಕಾಂಚ್ಯಾ ತಾಂಡ್ಯಾಕ್ಡೆ ಗೆಲೊ, ಅನಿ, “ಬಗಾ! ಮಾಕಾ ತೆಕಾ ಶಿಕ್ಷಾ ದಿ ಸರ್ಕೆ ಕಸ್ಲಿಬಿ ಚುಕ್ ಗಾವುಕ್ನಾ ಮನುನ್ ದಾಕ್ವುಸಾಟ್ನಿ ಮಿಯಾ ತೆಕಾ ತುಮ್ಚ್ಯಾ ಇದ್ರಾಕ್ ಹಾನುಲಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |