Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:42 - ಕನ್ನಡ ಸಮಕಾಲಿಕ ಅನುವಾದ

42 ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದಲೂ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವನ್ನು ಅಲ್ಲಿಯೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆ ದಿನವು ಯೆಹೂದ್ಯರ ಸೌರಣೆಯ ದಿನವಾದದ್ದರಿಂದ ಆ ಸಮಾಧಿ ಹತ್ತರವಿರುತ್ತದೆಂದು ಯೇಸುವನ್ನು ಅಲ್ಲೇ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತ್ಯಾತುರ್‍ಬಿ ತೊ ಸಬ್ಬಾತಾಚ್ಯಾ ಅದ್ಲೊ ದಿಸ್ ಹೊಲ್ಲೊ, ಅನಿ ತಿ ಸಮಾದಿಬಿ ಜಗ್ಗೊಳುಚ್ ಹೊತ್ತಿ ತಸೆಮನುನ್ ತೆನಿ ಜೆಜುಚೆ ಮಡೆ ತ್ಯಾ ಸಮಾದಿತ್ ಥವಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:42
10 ತಿಳಿವುಗಳ ಹೋಲಿಕೆ  

ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.


ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.


ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.


ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.


ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು