ಯೋಹಾನ 19:5 - ಕನ್ನಡ ಸಮಕಾಲಿಕ ಅನುವಾದ5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆಂಪು ಒಲ್ಲಿಯನ್ನೂ ಧರಿಸಿದವನಾಗಿ ಹೊರಕ್ಕೆ ಬಂದನು. ಪಿಲಾತನು ಅವರಿಗೆ - ಇಗೋ, ಈ ಮನುಷ್ಯನು! ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಶೆ ಕಾಟ್ಯಾಂಚೆ ಕಿರಿಟ್ ಅನಿ ಜಾಂಬ್ಳೊ ಝಗೊ ನೆಸಲ್ಲೊ ಜೆಜು ಭಾಯ್ರ್ ಯೆಲೊ. ತನ್ನಾ ಪಿಲಾತಾನ್ ತೆಂಕಾ “ಬಗಾ! ಹ್ಯಾ ಮಾನ್ಸಾಕ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |