Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:9 - ಕನ್ನಡ ಸಮಕಾಲಿಕ ಅನುವಾದ

9 ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:9
18 ತಿಳಿವುಗಳ ಹೋಲಿಕೆ  

ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.


ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.


ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.


ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಅದಕ್ಕೆ ಯೇಸು ಅವನಿಗೆ, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ ಇಲ್ಲವೆ ಬೇರೆಯವರು ನನ್ನನ್ನು ಕುರಿತು ನಿನಗೆ ಹೇಳಿದ್ದಾರೋ?” ಎಂದರು.


ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.


ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು