Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:12 - ಕನ್ನಡ ಸಮಕಾಲಿಕ ಅನುವಾದ

12 ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಾದ ಮೇಲೆ ಆತನೂ ಆತನ ತಾಯಿಯೂ ತಮ್ಮಂದಿರೂ ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌವಿುಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಹೊಲ್ಲ್ಯಾ ಮಾನಾ ಜೆಜು ತೆಚಿ ಬಾಯ್, ಭಾವಾ, ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ, ಅನಿ ಎಕ್ ಉಲ್ಲಿ ದಿಸಾ ಥೈಚ್ ರ್‍ಹಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:12
12 ತಿಳಿವುಗಳ ಹೋಲಿಕೆ  

ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.


ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?


ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.


ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.


ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು