Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತರ ಬಂದದರಿಂದ ಯೇಸು ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಹೂದ್ಯರ ಪಸ್ಕಹಬ್ಬ ಬಹು ಸಮೀಪವಾಗಿತ್ತು. ಆದ್ದರಿಂದ ಯೇಸು ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುದೆವಾಂಚೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ, ತಸೆ ಮನುನ್ ಜೆಜು ವೈರ್ ಜೆರುಜಲೆಮಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:13
14 ತಿಳಿವುಗಳ ಹೋಲಿಕೆ  

ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.


ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.


ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


ಆ ಕೊಠಡಿಯೊಳಗಿಂದ ಟೋಬೀಯನ ವಸ್ತುಗಳನ್ನೆಲ್ಲಾ ಹೊರಗೆ ಹಾಕಿಸಿದೆನು.


ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.


ತರುವಾಯ ಅವರು ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ, ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.


ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು