Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:25 - ಕನ್ನಡ ಸಮಕಾಲಿಕ ಅನುವಾದ

25 ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಂಚ್ಯಾ ವಿಶಯಾತ್ ತೆಕಾ ಕೊನ್ಬಿ ಸಾಂಗುಚೆ ಮನುನ್ ನತ್ತೆ, ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾ ಮನಾತ್ನಿ ಕಾಯ್ ಹಾಯ್ ಮನುನ್ ಜೆಜುಕ್ ಗೊತ್ತ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:25
9 ತಿಳಿವುಗಳ ಹೋಲಿಕೆ  

ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.


ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?


ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.


ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?


ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು