Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೂದ್ಯರ ಶುದ್ಧಾಚಾರದ ಪದ್ಧತಿಯ ಪ್ರಕಾರ ಎರಡು ಮೂರು ಕೊಳಗ ನೀರು ಹಿಡಿಯುವ ಆರು ಕಲ್ಲಿನ ಬಾನೆಗಳು ಅಲ್ಲಿ ಇಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜುದೆವ್ ಲೊಕಾಂಚ್ಯಾ ಖಾಯ್ದ್ಯಾಂಚ್ಯಾ ಸಾರ್ಕೆ ಹಾತ್-ಪಾಯ್ ಧುವ್ನ್ ಪವಿತ್ರ್ ಕರುನ್ ಘೆವ್ಕ್ ಮನುನ್ ಪಾನಿ ಭರುನ್ ಥವ್ತಲೆ, ಸಾ, ಮೊಟೆ ಗುಂಡ್ಯಾಂಚೆ ಢೊನೆ ಅಯ್ಸಿ ತೆ ಎಕ್ಸೆ ವಿಸ್ ಲಿಟರ್ ಪಾನಿ ಮಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:6
9 ತಿಳಿವುಗಳ ಹೋಲಿಕೆ  

ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.


ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.


“ ‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.


ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು