ಯೋಹಾನ 20:19 - ಕನ್ನಡ ಸಮಕಾಲಿಕ ಅನುವಾದ19 ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತ್ಯಾಚ್ ಆಯ್ತಾರ್‍ಚೆ ಸಾಂಚೆಕ್ಡೆ ಸಗ್ಳಿ ಶಿಸಾ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವ್ನ್, ದಾರಾ ಧಾಪುನ್ ಘೆವ್ನ್ ಭುತ್ತುರ್ ಬಸಲ್ಲಿ ಹೊತ್ತಿ ತನ್ನಾ ಜೆಜು ಯೆಲೊ, ಅನಿ ತೆಂಚ್ಯಾ ಮದ್ದಿ ಇಬೆ ರ್‍ಹಾಲೊ, ಅನಿ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |