Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:14 - ಕನ್ನಡ ಸಮಕಾಲಿಕ ಅನುವಾದ

14 ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೇಸು ಸತ್ತು ಜೀವದಿಂದೆದ್ದ ಮೇಲೆ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಸೆ, ಜೆಜು ಝಿತ್ತೊ ಹೊವ್ನ್ ಉಟಲ್ಲ್ಯಾಕ್ನಾ ತಿನ್ವೆಪಟಿ ಶಿಸಾಕ್ನಿ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:14
6 ತಿಳಿವುಗಳ ಹೋಲಿಕೆ  

ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.


ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:


ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು