Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:2 - ಕನ್ನಡ ಸಮಕಾಲಿಕ ಅನುವಾದ

2 ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನನ್ನು ತೋರಿಸಿಕೊಂಡ ರೀತಿ ಯಾವದಂದರೆ - ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಕುಮಾರರೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸಿಮಾವ್ ಪೆದ್ರು, ಥೊಮಸ್, ಗಾಲಿಲಿಯಾತ್ಲ್ಯಾ ಕಾನಾ ಶಾರಾತ್ಲೊ ನಾಥಾನಾಯೆಲ್ ಜೆಬೆದೆವಾಚಿ ಲೆಕಾ, ಅನಿ ದೊಗೆಲೊಕಾ ಜೆಜುಚಿ ಶಿಸಾ ಎಕಾಕ್ಡೆ ಜಮಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:2
12 ತಿಳಿವುಗಳ ಹೋಲಿಕೆ  

ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.


ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು.


ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.


ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು