Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:6 - ಕನ್ನಡ ಸಮಕಾಲಿಕ ಅನುವಾದ

6 ಯೇಸು ಶಿಷ್ಯರಿಗೆ, “ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ,” ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ದೋಣಿಯ ಬಲಗಡೆಗೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಅವರಿಗೆ - ನೀವು ದೋಣಿಯ ಬಲಗಡೆಯಲ್ಲಿ ಬಲೆ ಬೀಸಿದರೆ ಸಿಕ್ಕುವದು ಎಂದು ಹೇಳಿದನು. ಅವರು ಹಾಗೆ ಬೀಸಿದಾಗ ಮೀನುಗಳು ಬಹಳ ಹೆಚ್ಚಾಗಿ ಸಿಕ್ಕಿದ್ದರಿಂದ ಬಲೆಯನ್ನು ಎಳೆಯುವದಕ್ಕೆ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತೆಂಕಾ, “ತುಮಿ ತುಮ್ಚಿ ಜಾಳಿ ಢೊನಿಚ್ಯಾ ಉಜ್ವ್ಯಾ ಬಾಜುಕ್ ಟಾಕಾ, ತನ್ನಾ ತುಮ್ಕಾ ಕಾಯ್ಬಿ ಗಾವ್ತಾ,” ಮಟ್ಲ್ಯಾನ್ ತನ್ನಾ ತೆನಿ ಜಾಳೆ ಟಾಕ್ಲ್ಯಾನಿ ತನ್ನಾ ತೆಂಚ್ಯಾನ್ ಜಾಳೆ ವೊಡುಕ್ ಹೊಯ್ನಾ ಹೊಲೆ, ತವ್ಡ್ಯಾ ಮಾಸೊಳ್ಯಾ ತ್ಯಾತುರ್ ಪಡಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:6
8 ತಿಳಿವುಗಳ ಹೋಲಿಕೆ  

ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ.


ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು