Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:11 - ಕನ್ನಡ ಸಮಕಾಲಿಕ ಅನುವಾದ

11 ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನಗೆ ನಿಜನಿಜವಾಗಿ ಹೇಳುತ್ತೇನೆ, ತಿಳಿದದ್ದನ್ನು ಹೇಳುತ್ತೇವೆ, ನೋಡಿದ್ದಕ್ಕೆ ಸಾಕ್ಷಿಕೊಡುತ್ತೇವೆ; ನೀವು ನಮ್ಮ ಸಾಕ್ಷಿಯನ್ನು ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಅಮ್ಕಾ ಕಾಯ್ ಗೊತ್ತ್ ಹಾಯ್ ತೆಚ್ ಸಾಂಗ್ತಾವ್, ಅನಿ ಅಮಿ ಕಾಯ್ ಬಗಟ್ಲಾವ್ ತ್ಯೆಚ್ಯಾ ವಿಶಯಾತುಚ್ ಅಮಿ ಸಾಕ್ಷಿ ದಿತಾಂವ್. ಖರೆ ಅಜುನ್‍ಬಿ ತುಮಿ ಕೊನ್ಬಿ ಅಮಿ ಸಾಂಗಲ್ಲ್ಯಾ ಗೊಸ್ಟಿಯ್ಯಾ ತುಮಿ ಸ್ವಿಕಾರ್ ಕರಿನ್ಯಾಸಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:11
31 ತಿಳಿವುಗಳ ಹೋಲಿಕೆ  

ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು.


ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.


ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.


ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.


ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.


ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು