Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:13 - ಕನ್ನಡ ಸಮಕಾಲಿಕ ಅನುವಾದ

13 ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸರ್‍ಗಾ ವೈನಾ ಉತ್ರುನ್ ಯೆಲ್ಲ್ಯಾ ಮಾನ್ಸಾಚ್ಯಾ ಲೆಕಾಕ್ ಎಕ್ಲ್ಯಾಕ್ ಸೊಡುನ್, ಅನಿ ಕೊನ್ಬಿ ಸರ್ಗಾತ್ ಗೆಲ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:13
24 ತಿಳಿವುಗಳ ಹೋಲಿಕೆ  

ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’


ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


“ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.


ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.


“ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ.


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು