ಯೋಹಾನ 3:18 - ಕನ್ನಡ ಸಮಕಾಲಿಕ ಅನುವಾದ18 ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಲೆಕಾಚ್ಯಾ ವರ್ತಿ ವಿಶ್ವಾಸ್, ಕರ್‍ತಲ್ಯಾಂಚಿ ಇಚಾರ್‍ನಿ ಹೊಯ್ನಾ ಜೆ ಕೊನ್ ವಿಶ್ವಾಸ್, ಕರಿನಾತ್ ತೆಂಚಿ ಅದ್ದಿ ಇಚಾರ್‍ನಿ ಕರುನ್ ಹೊಲಾ, ಕಶ್ಯಾಕ್ ಮಟ್ಲ್ಯಾರ್ ತೆನಿ ದೆವಾಚ್ಯಾ ಎಕ್ಲ್ಯಾಚ್ ಲೆಕಾಚ್ಯಾ ವರ್ತಿ ವಿಶ್ವಾಸ್, ಕರುಕ್‍ನ್ಯಾತ್. ಅಧ್ಯಾಯವನ್ನು ನೋಡಿ |