ಯೋಹಾನ 3:2 - ಕನ್ನಡ ಸಮಕಾಲಿಕ ಅನುವಾದ2 ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಎಕ್ ದಿಸ್ ರಾಚ್ಚೆ ನಿಕೊದೆಮ್ ಜೆಜುಕ್ಡೆ ಗೆಲೊ, ಅನಿ ಜೆಜುಕ್, “ರಬ್ಬಿ ತಿಯಾ ದೆವಾನ್ ಧಾಡುನ್ ದಿಲ್ಲೊ ಎಕ್ ಗುರುಜಿ ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಫಾಟಿರ್ ರ್‍ಹಾಲ್ಯಾ ಶಿವಾಯ್ ಕೊನಾಕ್ಬಿ ತಿಯಾ ಕರ್‍ತೆ ತಸ್ಲಿ ಅಜಾಪಾ ಕರುಕ್ ಹೊಯ್ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |