Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:29 - ಕನ್ನಡ ಸಮಕಾಲಿಕ ಅನುವಾದ

29 ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೂ ಮದಲಿಂಗನ ಗೆಳೆಯನು ಅವನ ಹತ್ತರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಇದರಂತೆ ನನಗಿರುವ ಸಂತೋಷ; ಅದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ನ್ಹವ್ರೊ ಮಟ್ಲ್ಯಾರ್, ಕೊನ್ ಮಟ್ಲ್ಯಾರ್ ತೆಕಾ ನ್ಹವ್ರಿ ಸಮಂದ್ ಪಡಲ್ಲಿ ರ್‍ಹಾತಾ; ಖರೆ ನ್ಹವ್ರ್ಯಾಚ್ಯಾ ದೊಸ್ತಾಕ್ ನ್ಹವ್ರ್ಯಾಚೊ ಧನ್ ಅಪ್ನಾಚ್ಯಾ ಕಾನಾತ್ ಪಡಲ್ಲ್ಯಾ ತನ್ನಾ ತೆಕಾ ಲೈ ಕುಶಿ ಹೊತಾ. ತೊ ತ್ಯೆಚ್ಯಾ ಬಾಜುಕುಚ್ ಇಬೆರಾಲ್ಲೊ ರ್‍ಹಾತಾ. ಹ್ಯಾ ಥರಿನ್ ಮಾಜಿ ಸ್ವತಾಚಿ ಕುಶಿ ಪುರಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:29
27 ತಿಳಿವುಗಳ ಹೋಲಿಕೆ  

ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,


ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ಆಕೆಯ ಸಾಂತ್ವನ ಸ್ತನವನ್ನು ಕುಡಿದು ನೀವು ತೃಪ್ತಿಯಾಗಿರುವಿರಿ. ನೀವು ಕುಡಿಯುವಿರಿ ಮತ್ತು ಅದರ ಸಮೃದ್ಧಿಯು ನಿಮ್ಮ ಸಂತೋಷಕ್ಕೆ ಕಾರಣವಾಗಿದೆ.”


ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.


ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.


“ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.


“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.


ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು