Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:32 - ಕನ್ನಡ ಸಮಕಾಲಿಕ ಅನುವಾದ

32 ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜೆ ಕಾಯ್ ಅಪ್ನಿ ಬಗಟ್ಲ್ಯಾನಾಯ್, ಅನಿ ಆಯಿಕ್ಲ್ಯಾನಾಯ್ ತ್ಯೆಚ್ಯಾ ವಿಶಯಾತುಚ್ ಲೊಕಾ ಸ್ವಿಕಾರ್ ಕರಿನಾತ್. ಖರೆ ಅಜುನ್‍ಬಿ ಕೊನ್ಬಿ ತೆನಿ ದಿಲ್ಲಿ ಸಾಕ್ಷಿ ಮಾನುನ್ ಘೆಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:32
13 ತಿಳಿವುಗಳ ಹೋಲಿಕೆ  

ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.


ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.


ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು