Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:33 - ಕನ್ನಡ ಸಮಕಾಲಿಕ ಅನುವಾದ

33 ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ಜೆ ಕೊನ್ ತೆಚಿ ಸಾಕ್ಷಿ ಸ್ವಿಕಾರ್ ಕರ್‍ತಾ ತೊ ಅಶೆಚ್ ಕರುನ್ ದೆವ್ ಕರೊ ಮನುನ್ ಸಾಬಿತ್ ಕರ್‍ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:33
17 ತಿಳಿವುಗಳ ಹೋಲಿಕೆ  

ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.


ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು