ಯೋಹಾನ 3:8 - ಕನ್ನಡ ಸಮಕಾಲಿಕ ಅನುವಾದ8 ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಗಾಳಿಯು ಮನಸ್ಸು ಬಂದ ಕಡೆ ಬೀಸುತ್ತದೆ; ಅದರ ಸಪ್ಪಳವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು; ಆತ್ಮನಿಂದ ಹುಟ್ಟಿದವರೆಲ್ಲರು ಅದರಂತೆಯೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ವಾರೊ ಅಪ್ನಾಕ್ ಕಶೆ ಪಾಜೆ ತಶೆ ಖೆಳ್ತಾ ತೆಚೊ ಅವಾಜ್ ಎವ್ಡೊಚ್ ತುಕಾ ಆಯ್ಕೊ ಯೆತಾ, ಖರೆ ತೊ ಖೈತ್ನಾ ಯೆವ್ಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ತುಕಾ ಗೊತ್ತ್ ರ್‍ಹಾಯ್ನಾ ಅಸೆಚ್ ಸಗ್ಳಿ ಲೊಕಾ ಆತ್ಮ್ಯಾಚ್ಯಾ ವೈನಾ ಉಪಜ್ತಾತ್. ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |