Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ಬಾಯ್ಕೊಮನ್ಸಿನ್, “ಸಾಯ್ಬಾ, ತುಜೆಕ್ಡೆ ಘಾಗರ್ ನಾ, ಅನಿ ಭಾಂಯ್‍ಬಿ ಬರಿಚ್ ಖೊಲ್ ಹಾಯ್, ಜಿವ್ ದಿತಲೆ ಪಾನಿ ತುಕಾ ಕಶೆ ಗಾವ್ತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:11
10 ತಿಳಿವುಗಳ ಹೋಲಿಕೆ  

ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು