Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ನೀವು ಒಬ್ಬ ಪ್ರವಾದಿಯೆಂದು ನನಗೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಆ ಮಹಿಳೆ, “ಸ್ವಾಮೀ, ತಾವು ಪ್ರವಾದಿ ಎಂದು ನನಗೀಗ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಹೆಂಗಸು ಆತನಿಗೆ - ಅಯ್ಯಾ, ನೀನು ಪ್ರವಾದಿಯೆಂದು ನನಗೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತಿನಿ, “ಸಾಯ್ಬಾ ತಿಯಾ ಎಕ್ ಪ್ರವಾದಿ ಮನುನ್ ದಿಸ್ತಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:19
14 ತಿಳಿವುಗಳ ಹೋಲಿಕೆ  

ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು.


ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.


ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.


ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.


ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು