Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಎಳ್ ಯೆವ್ಲಾ, ಅನಿ ಖರೆಬಿ ತೊ ಎಳ್ ಯೆವ್ನ್ ಪಾವ್ಲಾ, ಆರಾದನ್ ಕರ್‍ತಲ್ಯಾ ಲೊಕಾನಿ ಬಾಬಾ ಹುಡಕ್ತಾ ದೆವಾಚ್ಯಾ ಆತ್ಮ್ಯಾನ್ ಅನಿ ಖರ್‍ಯಾಪಾನಾನಿ ಭರಲ್ಲಿ ಲೊಕಾ ಬಾಬಾಕ್ ತೊ ಕಸೊ ಹಾಯ್ ತಸೊಚ್ ತೆಚಿ ಅನಿ ತೆಕಾ ಖರೆಪಾನಾನಿ ಆರಾದನ್ ಕರ್‍ತಲಿ ಲೊಕಾಚ್ ಪಾಜೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:23
39 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.


ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.


ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.


ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.


“ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು