Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:3 - ಕನ್ನಡ ಸಮಕಾಲಿಕ ಅನುವಾದ

3 ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಇದನ್ನು ತಿಳಿದು ಜುದೇಯವನ್ನು ಬಿಟ್ಟು ಮತ್ತೆ ಗಲಿಲೇಯಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ, ಆತನು ಜುದೇಯವನ್ನು ಬಿಟ್ಟು ಮತ್ತೆ ಗಲಿಲಾಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಶೆ ಲೊಕಾ ಕಾಯ್- ಕಾಯ್ ಸಾಂಗುಲಾಲ್ಯಾತ್ ಮನುನ್ ಜೆಜುನ್ ಆಯಿಕ್ಲ್ಯಾನ್, ತನ್ನಾ ತೊ ಜುದೆಯಾ ಸೊಡುನ್ ಅನಿ ಪರ್ತುನ್ ಗಾಲಿಲಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:3
11 ತಿಳಿವುಗಳ ಹೋಲಿಕೆ  

ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.


ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.


ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.


ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.


ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.


ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು