ಯೋಹಾನ 4:39 - ಕನ್ನಡ ಸಮಕಾಲಿಕ ಅನುವಾದ39 ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತ್ಯಾ ಬಾಯ್ಕೊಮನ್ಸಿನ್ “ಮಿಯಾ ಕರಲ್ಲೆ ಸಗ್ಳೆ ತೆನಿ ಮಾಕಾ ಸಾಂಗ್ಲ್ಯಾನ್” ಮನುನ್ ಸಾಂಗಲ್ಲ್ಯಾ ತನ್ನಾ ತ್ಯಾ ಶಾರಾತ್ಲ್ಯಾ ಸುಮಾರ್ ಸಮಾರಿಯಾಚ್ಯಾ ಲೊಕಾನಿ ಜೆಜುಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ. ಅಧ್ಯಾಯವನ್ನು ನೋಡಿ |