Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:41 - ಕನ್ನಡ ಸಮಕಾಲಿಕ ಅನುವಾದ

41 ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇನ್ನೂ ಅನೇಕರಿಗೆ ಯೇಸುವಿನ ಬೋಧನೆಯನ್ನು ಅವರ ಬಾಯಿಂದಲೇ ಕೇಳಿ ಅವರಲ್ಲಿ ನಂಬಿಕೆ ಮೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆತನು ಹೇಳಿದ ಸಂಗತಿಗಳನ್ನು ಕೇಳಿ ಇನ್ನೂ ಅನೇಕ ಜನರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಸಾಂಗ್ತಲಿ ಬರಿ ಖಬರ್ ಆಯ್ಕುನ್ ಸುಮಾರ್ ಲೈ ಲೊಕಾನಿ ತ್ಯೆಚೆರ್ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:41
13 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.


ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು