Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:45 - ಕನ್ನಡ ಸಮಕಾಲಿಕ ಅನುವಾದ

45 ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಗಲಿಲಾಯದವರು ತಾವೂ ಯೆರೂಸಲೇವಿುನ ಜಾತ್ರೆಗೆ ಹೋಗಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ನೋಡಿದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಆದರದಿಂದ ಅಂಗೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತೊ ಗಾಲಿಲಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಥೈತ್ಲ್ಯಾ ಲೊಕಾನಿ ತೆಕಾ ಸ್ವಾಗತ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆರುಜಲೆಮಾಕ್ ಪಾಸ್ಕಾಚ್ಯಾ ಸನಾಕ್ ಗೆಲ್ಲ್ಯಾ ತನ್ನಾ ಜೆಜುನ್ ಕರಲ್ಲಿ ಸಗ್ಳಿ ಕಾಮಾ ತೆನಿ ಬಗಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:45
10 ತಿಳಿವುಗಳ ಹೋಲಿಕೆ  

ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.


ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.


ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.


ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು