Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:47 - ಕನ್ನಡ ಸಮಕಾಲಿಕ ಅನುವಾದ

47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಪ್ರಧಾನನು ಕೇಳಿದಾಗ ತನ್ನ ಮಗನು ಸಾಯುವ ಹಾಗಿದ್ದದರಿಂದ ಯೇಸುವಿನ ಬಳಿಗೆ ಹೋಗಿ - ನೀನು ಇಳಿದು ಬಂದು ನನ್ನ ಮಗನನ್ನು ಸ್ವಸ್ಥಮಾಡಬೇಕೆಂದು ಬೇಡಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್‌ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಜೆಜು ಜದೆಯಾತ್ನಾ ಗಾಲಿಲಿಯಾಕ್ ಯೆಲಾ ಮನ್ತಲೆ ಆಯ್ಕಲ್ಲ್ಯಾ, ತನ್ನಾ ತೊ ಜೆಜುಕ್ಡೆ ಗೆಲೊ, ಅನಿ ಶಿಕ್ ಪಡುನ್ ಮರ್‍ತಲ್ಯಾ ಪರಿಸ್ತಿತಿರ್ ಹೊತ್ತ್ಯಾ ಅಪ್ನಾಚ್ಯಾ ಲೆಕಾಕ್ ಕಫರ್ನವ್ಕ್ ಜಾವ್ನ್ ಗುನ್ ಕರ್ ಮಾಗುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:47
12 ತಿಳಿವುಗಳ ಹೋಲಿಕೆ  

ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.


ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.


ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.


ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು


ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು