Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:5 - ಕನ್ನಡ ಸಮಕಾಲಿಕ ಅನುವಾದ

5 ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೋಗುವಾಗ ಸಮಾರ್ಯಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂವಿುಯ ಹತ್ತಿರದಲ್ಲಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಮಾರಿಯಾತ್ ತೊ ಸಿಖಾರ್ ಮನ್ತಲ್ಯಾ ಶಾರಾತ್ ಯೆವ್ನ್ ಪಾವ್ಲೊ, ಹೆ ಜಾಕೊಬಾನ್ ಅಪ್ನಾಚ್ಯಾ ಲೆಕಾಕ್ ಜುಜೆಕ್ ದಿಲ್ಲ್ಯಾ ಶೆತಾಕ್ನಾ ಲೈ ಧುರ್ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:5
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.


ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.


ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.


ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.


ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.


ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.


ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು.


ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು