Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:6 - ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಜಾಕೊಬಾಚಿ ಭಾಂಯ್ ಹೊತ್ತಿ, ಜೆಜುಕ್ ಚಲುನ್‍ಚಲುನ್ ಫಿರೆ ಹೊಲ್ಲೆ, ಮನುನ್ ತೊ ಥೈ ಭಾಂಯ್ಚ್ಯಾ ಕಟ್ಟ್ಯಾರ್ ಬಸ್ಲೊ, ತನ್ನಾ ಜಗ್ಗೊಳ್ ದೊಪಾರ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:6
12 ತಿಳಿವುಗಳ ಹೋಲಿಕೆ  

ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು.


ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.


ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.


ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು.


ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು