Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:21 - ಕನ್ನಡ ಸಮಕಾಲಿಕ ಅನುವಾದ

21 ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶೆ ಬಾಬಾ ಮರಲ್ಲ್ಯಾಕ್ನಿ ಝಿತ್ತೊ ಕರುನ್ ಉಟ್ವುತಾ, ತಸೆಚ್ ಅಪ್ನಾಕ್ ಪಾಜೆ ಹೊಲ್ಲ್ಯಾಕ್ನಿ ಲೆಕ್‍ಬಿ ಝಿತ್ತೆ ಕರುನ್ ಉಟ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:21
14 ತಿಳಿವುಗಳ ಹೋಲಿಕೆ  

ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು