Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:27 - ಕನ್ನಡ ಸಮಕಾಲಿಕ ಅನುವಾದ

27 ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ತೆನಿ ಇಚಾರ್‍ನಿ ಕರ್‍ತಲೊ ಹಕ್ಕ್ ಲೆಕಾಕ್ ದಿಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್ ತೊ ಮಾನ್ಸಾಚೊ ಲೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:27
15 ತಿಳಿವುಗಳ ಹೋಲಿಕೆ  

ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.


ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.


ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು