Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:28 - ಕನ್ನಡ ಸಮಕಾಲಿಕ ಅನುವಾದ

28 “ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಆಶ್ಚರ್ಯಪಡಬೇಡಿರಿ; ಸಮಾಧಿಗಳಲ್ಲಿರುವವರೆಲ್ಲರು ಆತನ ಧ್ವನಿಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮಿ ಅಜಾಪ್ ಹೊವ್ನಕಾಶಿ, ಎಕ್ ಎಳ್ ಯೆತಾ ತನ್ನಾ ಸಗ್ಳೆ ಮರಲ್ಲೆ ತೆಚೊ ಧನ್ ಆಯಿಕ್ತ್ಯಾತ್!.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:28
19 ತಿಳಿವುಗಳ ಹೋಲಿಕೆ  

ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.


ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.


ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.


ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು