Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:32 - ಕನ್ನಡ ಸಮಕಾಲಿಕ ಅನುವಾದ

32 ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನನ್ನ ವಿಷಯವಾಗಿ ಸಾಕ್ಷಿಹೇಳುವವನು ಮತ್ತೊಬ್ಬನಿದ್ದಾನೆ; ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿ ನಿಜವೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಕೊನ್‍ ಕಿ ದುಸ್ರೊಚ್ ಮಾಜ್ಯಾ ವಿಶಯಾತ್ ಸಾಕ್ಷಿ ದಿತಾ, ಅನಿ ತೊ ಸಾಂಗ್ತಲಿ ಸಾಕ್ಷಿ ಖರಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:32
11 ತಿಳಿವುಗಳ ಹೋಲಿಕೆ  

ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು.


ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು