Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಶೆ ಹೊಲ್ಲ್ಯಾ ಉಲ್ಲ್ಯಾ ಎಳಾಚ್ಯಾ ಮಾಗಿರ್ ದೆವಾಚೊ ದುತ್ ಖಾಲ್ತಿ ಯೆವ್ನ್ ರೊಗ್ ಲಾಗಲ್ಲ್ಯಾ ಮಾನುಸ್ ಸಗ್ಳ್ಯಾನ್ಕಿ ಫಿಡೆ ಜಾತಾ ಅನಿ ಹಾಲ್ತಲ್ಯಾ ಪಾನಿಯಾಕ್ಡೆ ಜಾವ್ನ್ ಪಾವ್ತಾ ತೊ ತೆಕಾ ರೊಗಾತ್ನಾ ಗುನ್ ಹೊಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:4
18 ತಿಳಿವುಗಳ ಹೋಲಿಕೆ  

ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.


ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.


ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.


ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.


ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.


ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.


ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು