Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:43 - ಕನ್ನಡ ಸಮಕಾಲಿಕ ಅನುವಾದ

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಿಯಾ ಮಾಜ್ಯಾ ಬಾಬಾಚ್ಯಾ ಅದಿಕಾರಾಚ್ಯಾ ವೈನಾ ಯೆಲಾ, ಖರೆ ತುಮಿ ಮಾಕಾ ಸ್ವಿಕಾರ್ ಕರುಕ್‍ನ್ಯಾಶಿ; ಕೊನ್‍ ತರ್ ಅಪ್ನಾಚ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆಲೊ ತರ್ ತುಮಿ ತೆಕಾ ಸ್ವಿಕಾರ್ ಕರ್‍ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:43
13 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


“ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.


ಹೀಗೆ ಈಜಿಪ್ಟಿನಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.


ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು