Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:46 - ಕನ್ನಡ ಸಮಕಾಲಿಕ ಅನುವಾದ

46 ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವನು ನನ್ನ ವಿಷಯವಾಗಿ ಬರೆದನು; ಆದದರಿಂದ ನೀವು ಮೋಶೆಯ ಮಾತನ್ನು ನಂಬುವವರಾಗಿದ್ದರೆ ನನ್ನ ಮಾತನ್ನೂ ನಂಬುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನೀವು ಮೋಶೆಯನ್ನು ನಿಜವಾಗಿಯೂ ನಂಬಿದ್ದರೆ, ನನ್ನನ್ನೂ ನಂಬುತ್ತಿದ್ದಿರಿ. ಯಾಕೆಂದರೆ ಅವನು ನನ್ನ ವಿಷಯವಾಗಿ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಜರ್ ತರ್ ತುಮಿ ಖರೆಚ್! ಮೊಯ್ಜೆಚ್ಯಾ ವರ್ತಿ ವಿಶ್ವಾಸ್ ಕರ್‍ತ್ಯಾಶಿ, ತರ್ ಮಾಜ್ಯಾ ವರ್‍ತಿಬಿ ತುಮಿ ವಿಶ್ವಾಸ್ ಕರಿ ಹೊತ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:46
21 ತಿಳಿವುಗಳ ಹೋಲಿಕೆ  

ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.


ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು