Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:6 - ಕನ್ನಡ ಸಮಕಾಲಿಕ ಅನುವಾದ

6 ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಪಡುನ್ ಹೊತ್ತ್ಯಾ ತ್ಯಾ ಮಾನ್ಸಾಕ್ ಜೆಜುನ್ ಬಗಟ್ಲ್ಯಾನ್, ಅನಿ ತೊ ಲೈ ದಿಸಾನಿಕ್ನಾ ಶಿಕ್ ಹೊತ್ತೊ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ಜೆಜುನ್ ತೆಕಾ “ತುಕಾ ಆರಾಮ್ ಹೊವ್ಕ್ ಮನ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:6
9 ತಿಳಿವುಗಳ ಹೋಲಿಕೆ  

ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


“ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.


ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.


ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು