Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:9 - ಕನ್ನಡ ಸಮಕಾಲಿಕ ಅನುವಾದ

9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಕ್ಷಣವೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಕ್ಷಣವೇ ಆ ಮನುಷ್ಯನು ಗುಣಹೊಂದಿ, ತನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆದನು. ಇದೆಲ್ಲಾ ನಡೆದದ್ದು ಸಬ್ಬತ್‌ದಿನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಾಬೊಡ್ತೊಬ್ ತೊ ಮಾನುಸ್ ಬರೊ ಹೊಲೊ; ತೆನಿ ಅಪ್ನಾಚೆ ಹಾತ್ರಾನ್ ಘೆಟ್ಲ್ಯಾನ್, ಅನಿ ಚಲುಕ್‍ಲಾಲೊ. ಹೆ ಘಡಲ್ಲೊ ದಿಸ್ ಸಬ್ಬಾತಾಚೊ ದಿಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:9
15 ತಿಳಿವುಗಳ ಹೋಲಿಕೆ  

ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.


ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.


ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.


ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.


ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?


ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು